ADVERTISEMENT

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಬಿಡುಗಡೆ

ಪಿಟಿಐ
Published 15 ಆಗಸ್ಟ್ 2022, 15:52 IST
Last Updated 15 ಆಗಸ್ಟ್ 2022, 15:52 IST
   

ಗೋದ್ರಾ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರದ ಕ್ಷಮಾಪಣೆ ನೀತಿ ಅ‌ನ್ವಯ ಸೋಮವಾರ ಗೋದ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಲ್ಕಿಸ್ ಬಾನು ಅವರ ಕುಟುಂಬದ ಏಳು ಸದಸ್ಯರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಆರೋಪದ ಮೇಲೆ 11 ಮಂದಿಗೆ 2008ರಜ.21 ಮುಂಬೈ ವಿಶೇಷ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಅಪರಾಧಿಗಳು 15 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ಅವರಲ್ಲಿ ಒಬ್ಬರು ಅವಧಿಪೂರ್ವ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು.

ADVERTISEMENT

ಅಪರಾಧಿಗಳ ಶಿಕ್ಷೆ ಹಿಂತೆಗೆದುಕೊಳ್ಳುವ ವಿಷಯ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿ ರಚಿಸಿತ್ತು ಎಂದು ಸಮಿತಿ ನೇತೃತ್ವ ವಹಿಸಿದ್ದ ಪಂಚಮಹಲ್ ಜಿಲ್ಲಾಧಿಕಾರಿ ಸುಜಲ್ ಮಾಯಾತ್ರಾ ತಿಳಿಸಿದರು.

‘ಕೆಲ ತಿಂಗಳ ಹಿಂದೆ ರಚಿಸಲಾದ ಸಮಿತಿಯು ಪ್ರಕರಣದ ಎಲ್ಲಾ 11 ಅಪರಾಧಿಗಳ ಕ್ಷಮಾಪಣೆ ಪರವಾಗಿ ಸರ್ವಾನುಮತದ ನಿರ್ಧಾರ ತೆಗೆದುಕೊಂಡು, ರಾಜ್ಯ ಸರ್ಕಾರಕ್ಕೆ ಶಿಫಾರಸು ಕಳುಹಿಸಿತ್ತು. ಭಾನುವಾರ ಅವರ ಬಿಡುಗಡೆ ಆದೇಶ ಸ್ವೀಕರಿಸಿದ್ದೇವೆ’ ಎಂದು ಮಾಯಾತ್ರಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.