ADVERTISEMENT

ಬಿಲ್ಕಿಸ್ ಬಾನು ಪ್ರಕರಣ: ದಾಖಲೆ ಸಲ್ಲಿಸಲು ಗುಜರಾತ್‌ಗೆ ‘ಸುಪ್ರೀಂ’ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 14:38 IST
Last Updated 9 ಸೆಪ್ಟೆಂಬರ್ 2022, 14:38 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಬಾನು ಕುಟುಂಬದ ಸದಸ್ಯರ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಎಲ್ಲ 11 ಅಪರಾಧಿಗಳಿಗೆ ಯಾವ ಆಧಾರದ ಮೇಲೆ ಕ್ಷಮಾದಾನ ನೀಡಿ, ಬಿಡುಗಡೆ ಮಾಡಲಾಗಿದೆ ಎನ್ನುವುದರ ಎಲ್ಲ ದಾಖಲೆ ಸಲ್ಲಿಸಲು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬಿ.ವಿ. ನಾಗರತ್ನ ಅವರಿದ್ದ ಪೀಠ, ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.

ಸಿಪಿಐಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್ ಮತ್ತು ಸಾಮಾಜಿಕ ಕಾರ್ಯಕರ್ತೆ ರೂಪ್‌ ರೇಖಾ ರಾಣಿ ಅವರ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಅಪರಾಧಿಗಳಿಗೂ ಪೀಠ ಅವಕಾಶ ಕಲ್ಪಿಸಿದೆ.

ADVERTISEMENT

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಕೂಡ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.