ADVERTISEMENT

ಬಿಲ್ಕಿಸ್‌ ಬಾನೊ ಪ್ರಕರಣ: 27ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಪಿಟಿಐ
Published 24 ಮಾರ್ಚ್ 2023, 13:46 IST
Last Updated 24 ಮಾರ್ಚ್ 2023, 13:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್‌ 27ರಂದು ನಡೆಸಲಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌ ಮತ್ತು ಬಿ.ವಿ. ನಾಗಾರತ್ನ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ.

ಅರ್ಜಿಗಳನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರು ಮಾರ್ಚ್‌ 22ರಂದು ನಿರ್ದೇಶನ ನೀಡಿದ್ದರು. ಇದಕ್ಕಾಗಿ ಹೊಸ ನ್ಯಾಯಪೀಠವನ್ನು ರಚಿಸಲು ಕೂಡ ಒಪ್ಪಿಗೆ ಸೂಚಿಸಿದ್ದರು.

ADVERTISEMENT

ಬಿಲ್ಕಿಸ್‌ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಅಜಯ್‌ ರಸ್ತೋಗಿ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು ಜನವರಿ 4ರಂದು ಪರಿಶೀಲಿಸಿತ್ತು. ಬಳಿಕ ಬೇಲಾ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.