ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಮೇಲಿನ ವಾದಗಳನ್ನು ಈ ತಿಂಗಳ 9ರಂದು ಆಲಿಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿತು.
ಲಿಖಿತ ರೂಪದಲ್ಲಿ ಸಂಕ್ಷಿಪ್ತವಾಗಿ ತಮ್ಮ ವಾದಗಳನ್ನು ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಹೇಳಿತು.
‘ನಿಮ್ಮ ಕೋರಿಕೆ ಮೇರೆಗೆ ಇಡೀ ಪ್ರಕರಣವನ್ನು ಮತ್ತೆ ಪುನರಾರಂಭಿಸುವ ಅಗತ್ಯವಿಲ್ಲ. ಅರ್ಜಿದಾರರ ಪರ ವಕೀಲರು ಲಿಖಿತವಾಗಿ ವಾದ ಮಂಡಿಸಿದರೆ ಸಾಕು’ ಎಂದು ವಕೀಲರಿಗೆ ಪೀಠ ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.