ADVERTISEMENT

ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸು‍ಪ್ರೀಂ ಮೆಟ್ಟಿಲೇರಿದ ಬಿಲ್ಕಿಸ್ ಬಾನು

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 8:36 IST
Last Updated 30 ನವೆಂಬರ್ 2022, 8:36 IST
   

ನವದೆಹಲಿ: 11 ಮಂದಿ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸಂತ್ರಸ್ತೆ ಬಿಲ್ಕಿಸ್ ಬಾನು ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

1992ರ ಕ್ಷಮಾಪಣಾ ನೀತಿ ಅನ್ವಯಕ್ಕೆ ಅನುವುಮಾಡಿಕೊಟ್ಟ ಮೇ ತಿಂಗಳ ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ ಎಂದು ಎಎನ್‌ಐ ಟ್ವೀಟಿಸಿದೆ.

2002 ಗೋಧ್ರಾ ಗಲಭೆ ಸಂದರ್ಭ ಬಿಲ್ಕಿಸ್ ಬಾನು ಅವರ ಕುಟುಂಬ ಸದಸ್ಯರನ್ನು ಕೊಂದು, ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು.

ADVERTISEMENT

ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಆಗಸ್ಟ್ 15ರಂದು ಗುಜರಾತ್‌ನ ಗೋದ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರದ ಕ್ಷಮಾಪಣೆ ನೀತಿ ಅ‌ನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.