ADVERTISEMENT

‘ತ್ರಿವಳಿ ತಲಾಖ್ ಮಸೂದೆ ಮತ್ತೆ ಮಂಡನೆ’

ಏಜೆನ್ಸೀಸ್
Published 3 ಜೂನ್ 2019, 20:01 IST
Last Updated 3 ಜೂನ್ 2019, 20:01 IST
   

ನವದೆಹಲಿ (ಪಿಟಿಐ): ತ್ರಿವಳಿ ತಲಾಖ್ ಪದ್ಧತಿಗೆ ನಿಷೇಧ ಹೇರುವ ಮಸೂದೆಯನ್ನು ಲೋಕಸಭೆಯಲ್ಲಿ ಪುನಃ ಮಂಡಿಸಲಾಗುವುದು ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸೋಮವಾರ ಹೇಳಿದ್ದಾರೆ.

ತ್ರಿವಳಿ ತಲಾಖ್ ಮಸೂದೆಯನ್ನು ಪುನಃ ಮಂಡನೆ ಮಾಡುವ ಕುರಿತು ಪ್ರತಿಕ್ರಿಯಿಸಿರುವ ರವಿಶಂಕರ್ ಪ್ರಸಾದ್, ‘ತ್ರಿವಳಿ ತಲಾಖ್ ವಿಷಯ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿದೆ. ಖಂಡಿತ ಮಸೂದೆ ಮಂಡನೆ ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ. ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತು. ಆದರೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರಲಿಲ್ಲ. 16ನೇ ಲೋಕಸಭೆ ವಿಸರ್ಜನೆಯಾದ ಕಾರಣ, ಈಗ ಮಸೂದೆ ಸಹ ರದ್ದಾಗಿದೆ. ರಾಜ್ಯಸಭೆಯಲ್ಲಿ ಮಂಡನೆಯಾದ ಮಸೂದೆ ಅಲ್ಲಿ ಅಂಗೀಕಾರವಾಗದೆ ಇದ್ದರೂ, ಲೋಕಸಭೆ ವಿಸರ್ಜನೆ ಆದಾಗ ರದ್ದಾಗುವುದಿಲ್ಲ. ಆದರೆ ಲೋಕಸಭೆಯಲ್ಲಿ ಮಂಡನೆಯಾದ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದೆ ಇದ್ದರೆ, ಲೋಕಸಭೆ ವಿಸರ್ಜನೆ ಆದಾಗ ರದ್ದಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT