ADVERTISEMENT

‘ಮಕ್ಕಳ ಆರೈಕೆ ಮತ್ತು ರಕ್ಷಣೆ‘ ಮಸೂದೆ ತಿದ್ದುಪಡಿಗಾಗಿ ಮಂಡನೆ

ಪಿಟಿಐ
Published 15 ಮಾರ್ಚ್ 2021, 9:42 IST
Last Updated 15 ಮಾರ್ಚ್ 2021, 9:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಮಕ್ಕಳ ರಕ್ಷಣೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿಗಳ ಪಾತ್ರವನ್ನು ಹೆಚ್ಚಿಸುವ ‘ಜುವೆನೈಲ್ ಜಸ್ಟೀಸ್‌(ಮಕ್ಕಳ ಆರೈಕೆ ಮತ್ತು ರಕ್ಷಣೆ) – 2015‘ ಮಸೂದೆಯನ್ನು ತಿದ್ದುಪಡಿಗಾಗಿ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಮಸೂದೆ ಮಂಡನೆಯ ವೇಳೆಯಲ್ಲಿ ಕಾಂಗ್ರೆಸ್‌ ನಾಯಕ ಶಶಿ ತರೂರ್ ಮಸೂದೆಯನ್ನು ವಿರೋಧಿಸಿದರು. ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಅವರು, ತರೂರ್‌ ಎತ್ತಿದ ಅಂಶಗಳನ್ನು ತಿರಸ್ಕರಿಸಿದರು. ನಂತರ, ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ತಿದ್ದುಪಡಿ ಮಸೂದೆಯನ್ನು– 2021 ಧ್ವನಿ ಮತಗಳ ಮೂಲಕ ಮಂಡಿಸಲಾಯಿತು.

ಸಂಪುಟದ ತೀರ್ಮಾನದ ಪ್ರಕಾರ ಪ್ರತಿ ಜಿಲ್ಲೆಯಲ್ಲೂ, ಜಿಲ್ಲಾಧಿಕಾರಿಗಳು ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿಗಳು, ಈ ಕಾಯ್ದೆ ಅನುಷ್ಠಾನಗೊಳಿಸುವ ಇಲಾಖೆಗಳ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವ ಅಧಿಕಾರವನ್ನು ಹೊಂದಿರುತ್ತಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕವೂ ಜಿಲ್ಲಾಧಿಕಾರಿ ಅವರ ಅಡಿಯಲ್ಲೇ ಕಾರ್ಯನಿರ್ವಹಿಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.