ADVERTISEMENT

ಲೋಕಸಭೆ: ಮಹಿಳೆಯರ ಮದುವೆ ವಯಸ್ಸು ಹೆಚ್ಚಳ ಮಸೂದೆ ಮಂಡನೆ

ಪಿಟಿಐ
Published 22 ಡಿಸೆಂಬರ್ 2021, 20:00 IST
Last Updated 22 ಡಿಸೆಂಬರ್ 2021, 20:00 IST
ಸ್ಮೃತಿ ಇರಾನಿ
ಸ್ಮೃತಿ ಇರಾನಿ   

ನವದೆಹಲಿ: ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಂಡಿಸಿದರು.

ಈ ಮಸೂದೆಗೆ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ ಸಮಗ್ರ ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸಲಾಯಿತು.

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು ಈಗಿನ 18 ವರ್ಷದಿಂದ 21 ವರ್ಷಕ್ಕೆ ಏರಿಸುವುದಕ್ಕೆ ಅವಕಾಶ ನೀಡುವ ‘ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಮಸೂದೆ–2021’ ಅನ್ನು ಮಂಡಿಸಿ ಮಾತನಾಡಿದ ಸಚಿವೆ ಇರಾನಿ, ‘ದೇಶದ ಇತಿಹಾಸದಲ್ಲಿಯೇ ಇದು ನಿರ್ಣಾಯಕ ಹೆಜ್ಜೆಯಾಗಿದೆ’ ಎಂದರು.

ADVERTISEMENT

ವಿರೋಧ ಪಕ್ಷಗಳ ಕೆಲ ಸದಸ್ಯರು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಈ ಮಸೂದೆಯಿಂದ ಕೆಲ ವೈಯಕ್ತಿಕ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.