ADVERTISEMENT

ಕಾಪ್ಟರ್ ಪತನ: ಘಟನಾ ಸ್ಥಳದಲ್ಲಿ CRPF ಕೋಬ್ರಾ ಪಡೆಯಿಂದ ಶಂಕಿತ ವ್ಯಕ್ತಿ ಅರೆಸ್ಟ್

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಡಿಸೆಂಬರ್ 2021, 10:06 IST
Last Updated 8 ಡಿಸೆಂಬರ್ 2021, 10:06 IST
ಘಟನಾ ಸ್ಥಳ
ಘಟನಾ ಸ್ಥಳ   

ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್)ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯಹೆಲಿಕಾಪ್ಟರ್ ಪತನಗೊಂಡಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನನ್ನು ಸಿಆರ್‌ಪಿಎಫ್‌ನ ಕೋಬ್ರಾ ಪಡೆ ಬಂಧಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ನೀಲಗೀರಿ ಅರಣ್ಯದ ಪರ್ವತ ಪ್ರದೇಶಗಳವೆಲ್ಲಿಂಗ್‌ಟನ್ ಬಳಿ ಈ ದುರ್ಘಟನೆ ನಡೆದಿದೆ.

ಸೇನಾಪಡೆಗಳ ಉನ್ನತ ನಾಯಕರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹೇಗಾಯಿತು ಎಂದು ಹಲವರು ಪ್ರಶ್ನಿಸುತ್ತಿದ್ದು ನೀಲಗೀರಿ ಕಾಡಿನಲ್ಲಿ ಪತನವಾಗಿದ್ದರ ಬಗ್ಗೆ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ADVERTISEMENT

ಇನ್ನು ಘಟನಾ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಗಂಭೀರವಾಗಿ ಗಾಯಗೊಂಡು ಪತ್ತೆಯಾಗಿರುವಮೂವರನ್ನು ನೀಲಗಿರೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಘಟನೆ ನಡೆದ ಸ್ಥಳ ವೆಲ್ಲಿಂಗ್‌ಟನ್‌ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ.

ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.

ತುರ್ತು ರಕ್ಷಣಾ ಪಡೆಗಳು ಸ್ಥಳದಲ್ಲಿ ತೀವ್ರ ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದು ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್‌ ಪತನಗೊಂಡಿರುವುದಾಗಿ ಐಎಎಫ್ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.