ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)
–ಪಿಟಿಐ ಚಿತ್ರ
ವಿಜಯವಾಡ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ವಿಜಯವಾಡದಿಂದ ಬೆಂಗಳೂರಿನ ನಿಗದಿತ ಪ್ರಯಾಣವನ್ನು ರದ್ದುಪಡಿಸಿದೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗಲು ವಿಮಾನ ರನ್‌ವೇಯಲ್ಲಿ ಚಲಿಸುತ್ತಿತ್ತು. ಈ ವೇಳೆ ಹಕ್ಕಿ (ಹದ್ದು) ಡಿಕ್ಕಿ ಹೊಡೆಯಿತು. ಇದರಿಂದ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟೇಕಾಫ್‌ಗೂ ಮುನ್ನವೇ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ರನ್‌ವೇಯಲ್ಲಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.