ಗುಜರಾತ್: ಬಿಜೆಪಿ ಭ್ರಷ್ಟಾಚಾರದ ಮೂಲಕ ಕೋಟ್ಯಂತರ ರುಪಾಯಿಗಳನ್ನು ತೊಡಗಿಸಿ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕೊಲೆಯಾಗಿದ್ದು,ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಚಾವ್ಡಾ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಎರಡು ಸ್ಥಾನಗಳಿಗೆ ನಡೆಯುವ ರಾಜ್ಯ ಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾವು ಎರಡೂ ಸ್ಥಾನಗಳಿಗೂ ಸ್ಪರ್ಧಿಸುತ್ತೇವೆ ಎಂದರು.
ಈಗಾಗಲೇ ನಾಲ್ಕು ಮಂದಿ ಶಾಸಕರು ರಾಜೀನಾಮೆ ನೀಡಿದ್ದು ಈ ರಾಜೀನಾಮೆ ಅಂಗೀಕಾರವಾಗಿದೆ. ಮತ್ತಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ. ಈ ಹೇಳಿಕೆಗುಜರಾತ್ ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.