ADVERTISEMENT

ತ್ರಿಪುರಾ ಸಿಎಂ ಮಾಣಿಕ್‌ ಸಾಹಾಗೆ ಜಯ: 4 ಸ್ಥಾನಗಳಲ್ಲಿ ಬಿಜೆಪಿಗೆ 3, ಕಾಂಗ್ರೆಸ್ 1

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 7:40 IST
Last Updated 26 ಜೂನ್ 2022, 7:40 IST
ತ್ರಿಪುರಾ ಮುಖ್ಯಮಂತ್ರಿ ಮಾಣಿಕ್‌ ಸಾಹಾ
ತ್ರಿಪುರಾ ಮುಖ್ಯಮಂತ್ರಿ ಮಾಣಿಕ್‌ ಸಾಹಾ   

ಅಗರ್ತಲಾ:ತ್ರಿಪುರಾದ ಮುಖ್ಯಮಂತ್ರಿಮಾಣಿಕ್‌ ಸಾಹಾ ಅವರು ಬರ್ದೊವಾಲಿ ವಿಧಾನಸಭಾ ಕ್ಷೇತ್ರದಿಂದ ಜಯ ಸಾಧಿಸಿದ್ದಾರೆ.

ಮಾಣಿಕ್‌ ಸಹಾ ಅವರು 6 ಸಾವಿರ ಮತಗಳಿಂದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ತ್ರಿಪುರಾದ ಅಗರ್ತಲಾ, ಜುಬಾರಾಜ್‌ನಗರ್‌, ಸುರ್ಮಾ ಹಾಗೂ ಬರ್ದೊವಾಲಿ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸಾಹಾ ಅವರು ಬರ್ದೊವಾಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವರಿಗೆ ಈ ಗೆಲುವು ಅನಿವಾರ್ಯವಾಗಿತ್ತು.

ADVERTISEMENT

4 ಸ್ಥಾನಗಳ ಪೈಕಿ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ಅಗರ್ತಲಾ ಕ್ಷೇತ್ರದಿಂದ ಗೆಲುವು ಕಂಡಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.

ವಿಪ್ಲವ್‌ ದೇವ್‌ ಅವರು ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಕಳೆದ ತಿಂಗಳು, ರಾಜ್ಯಸಭಾ ಸದಸ್ಯ ಮಾಣಿಕ್‌ ಸಾಹಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.