ADVERTISEMENT

ಬಿಜೆಪಿ-ಬಿಎಸ್‌ಎಸ್ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ: ಶಿಂದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಡಿಸೆಂಬರ್ 2022, 13:53 IST
Last Updated 30 ಡಿಸೆಂಬರ್ 2022, 13:53 IST
ಏಕನಾಥ ಶಿಂದೆ
ಏಕನಾಥ ಶಿಂದೆ   

ಮುಂಬೈ: ಬಿಜೆಪಿ-ಬಿಎಸ್‌ಎಸ್ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಶುಕ್ರವಾರ ಹೇಳಿದರು.

ಶಿವಸೇನಾ ಅಧ್ಯಕ್ಷ ಉದ್ಧವ್‌ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ ಶಿಂದೆ, ಮುಂದಿನ ಚುನಾವಣೆಯಲ್ಲೂ ಭರ್ಜರಿ ಗೆಲುವು ಸಾಧಿಸಲಿದ್ದೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಪ್ರಾರಂಭದಿಂದಲೂ ವಿರೋಧಿಗಳು ನೂತನ ಸರ್ಕಾರ ಒಂದೆರೆಡು ತಿಂಗಳಲ್ಲಿ ಪತನಗೊಳ್ಳಲಿದೆ ಎಂದು ಹೇಳುತ್ತಿದ್ದರು. ನಾವೀಗ ಆರು ತಿಂಗಳು ಪೂರ್ಣಗೊಳಿಸಿದ್ದೇವೆ. ಈಗ ಫೆಬ್ರುವರಿಯಲ್ಲಿ ಸರ್ಕಾರ ಬೀಳಲಿದೆ ಎಂದು ಹೇಳುತ್ತಾರೆ. ಯಾವ ಫೆಬ್ರುವರಿ? ಸರ್ಕಾರವು ಅವಧಿ ಪೂರ್ಣಗೊಳಿಸಲಿದ್ದು, ಮುಂದಿನ ಬಾರಿಯೂ ಬಹುಮತದೊಂದಿಗೆ ಅಧಿಕಾರ ಪಡೆಯಲಿದ್ದೇವೆ ಎಂದು ಹೇಳಿದರು.

ADVERTISEMENT

ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಶಿಂದೆ ಬಣ, ಸರ್ಕಾರದ ಪತನಕ್ಕೆ ಕಾರಣವಾಗಿದ್ದರು. ಬಳಿಕ ಬಿಜೆಪಿ ಜೊತೆ ಮೈತ್ರಿಯೊಂದಿಗೆ ನೂತನ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

ಒಬ್ಬರು ತಪ್ಪನ್ನು ಮಾಡಬಹುದು. ಆದರೆ 50 ಮಂದಿ ತಪ್ಪು ಮಾಡಲು ಹೇಗೆ ಸಾಧ್ಯ? ಪಕ್ಷದ ಧ್ವಜ ನಮ್ಮದಾಗಿದ್ದು, ಅಜೆಂಡಾ ಕೂಡ ನಮ್ಮದೇ ಎಂದು ಶಿಂದೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.