ADVERTISEMENT

ಉನ್ನಾವೊ ಅತ್ಯಾಚಾರ ಅಪರಾಧಿಯ ಪತ್ನಿಯ ಉಮೇದುವಾರಿಕೆ ರದ್ದುಗೊಳಿಸಿದ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 9:41 IST
Last Updated 11 ಏಪ್ರಿಲ್ 2021, 9:41 IST
ಸಂಗೀತಾ ಸೆಂಗರ್ (ಪಿಟಿಐ ಚಿತ್ರ)
ಸಂಗೀತಾ ಸೆಂಗರ್ (ಪಿಟಿಐ ಚಿತ್ರ)   

ಲಖನೌ: 2018ರ ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗರ್ ಪತ್ನಿಯ ಚುನಾವಣಾ ಉಮೇದುವಾರಿಕೆಯನ್ನು ಬಿಜೆಪಿ ರದ್ದುಗೊಳಿಸಿದೆ.

ಜಿಲ್ಲಾ ಪಂಚಾಯತ್ ಚುನಾವಣೆಗೆ ಏಪ್ರಿಲ್ 9ರಂದು ಬಿಜೆಪಿ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೆಂಗರ್ ಪತ್ನಿ, ಸಂಗೀತಾ ಸೆಂಗರ್ ಹೆಸರಿತ್ತು.

ಸಂಗೀತಾ ಸೆಂಗರ್ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಹೇಳಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.