ADVERTISEMENT

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪಿಟಿಐ
Published 17 ಜನವರಿ 2020, 19:49 IST
Last Updated 17 ಜನವರಿ 2020, 19:49 IST

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಗೆ57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.

ಫೆ.8ರಂದು 70 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಹಾಲಿ ಶಾಸಕ ವಿಜೇಂದರ್‌ ಗುಪ್ತಾ, ಮಾಜಿ ಮೇಯರ್‌ಗಳಾದ ರವೀಂದರ್‌ ಗು‍ಪ್ತಾ ಮತ್ತು ಯೋಗೇಂದರ್‌ ಚಾಂದೋಲಿಯಾ ಟಿಕೆಟ್‌ ಗಿಟ್ಟಿಸಿದ್ದಾರೆ.

ಅಭ್ಯರ್ಥಿಗಳ‍ಪಟ್ಟಿಯನ್ನು ದೆಹಲಿ ಘಟಕದ ಅಧ್ಯಕ್ಷ ಮನೋಜ್‌ ತಿವಾರಿ ಬಿಡುಗಡೆ ಮಾಡಿದ್ದು, ಮಾಜಿ ಎಎಪಿ ಶಾಸಕ ಕಪಿಲ್‌ ಮಿಶ್ರಾ ಮತ್ತು ಪರಿಶಿಷ್ಟ ವರ್ಗಗಳ 11 ಅಭ್ಯರ್ಥಿಗಳು, ನಾಲ್ವರು ಮಹಿಳೆಯರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ವಿರುದ್ಧ ಕಣಕ್ಕಿಳಿಸುವ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.