ಅರವಿಂದ ಕೇಜ್ರಿವಾಲ್
– ಪಿಟಿಐ ಚಿತ್ರ
ನವದೆಹಲಿ: ಬಾಲಿವುಡ್ ನಟ ಸೈಫ್ ಅಲಿಖಾನ್ ಅವರ ಮೇಲಿನ ದಾಳಿಯನ್ನು ಉಲ್ಲೇಖಿಸಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಡಬಲ್ ಎಂಜಿನ್ ಸರ್ಕಾವು ಸೈಫ್ ಅಲಿ ಖಾನ್ ರಂತಹ ಸೆಲೆಬ್ರಿಟಿಗಳ ಸುರಕ್ಷತೆಯನ್ನೇ ಖಚಿತಡಿಸಿಕೊಳ್ಳದಿರುವಾಗ, ಸಾಮಾನ್ಯ ಜನರು ಏನನ್ನು ನಿರೀಕ್ಷಿಸಬಹುದು’ ಎಂದು ಪ್ರಶ್ನಿಸಿದ್ದಾರೆ.
‘ಇಂತಹ ದಾಳಿ ಹೊಸದಲ್ಲ. ಸಲ್ಮಾನ್ ಖಾನ್ ಅವರ ನಿವಾಸದ ಬಳಿ ಗುಂಡಿನ ದಾಳಿ ನಡೆದಿತ್ತು. ಬಿಜೆಪಿಯೊಂದಿಗೆ ಮೈತ್ರಿಯಾಗಿದ್ದ ಪಕ್ಷದ ನಾಯಕ ಬಾಬಾ ಸಿದ್ದೀಕಿಯವರ ಕೊಲೆಯಾಗಿದೆ. ಇದು ದೇಶದ ಕಾನೂನು ಸುವ್ಯವಸ್ಥೆಯ ದ್ಯೋತಕ’ ಎಂದು ಅವರು ಟೀಕಿಸಿದ್ದಾರೆ.
‘ಬಿಜೆಪಿಗೆ ಭಾರತ–ಬಾಂಗ್ಲಾದೇಶ ಗಡಿಯನ್ನು ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಶದ ಸೆಲೆಬ್ರಿಟಗಳ, ದೇಶದ ರಾಜಧಾನಿಯ ರಕ್ಷಣೆ ಮಾಡಲಾಗುತ್ತಿಲ್ಲ. ದೆಹಲಿಯ ರಸ್ತೆಗಳಲ್ಲಿ ಗ್ಯಾಂಗ್‌ವಾರ್ ನಡೆಯುತ್ತಿದೆ. ವ್ಯಾಪಾರಿಗಳಿಗೆ ಬೆದರಿಕೆ ಕರೆಗಳು ಬರುತ್ತಿವೆ’ ಎಂದರು.
ವ್ಯಾಪಾರಿಗಳು, ಮಹಿಳೆಯರು, ಮಕ್ಕಳಿಗೆ ಸುರಕ್ಷತೆ ಇಲ್ಲ. ಡಬಲ್ ಎಂಜಿನ್ ಸರ್ಕಾರಕ್ಕೆ ಒಳ್ಳೆಯ ಆಡಳಿತ ನೀಡಲೂ ಬರುವುದಿಲ್ಲ. ದೇಶದ ಸುರಕ್ಷತವಾಗಿಡಲೂ ಗೊತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.