ADVERTISEMENT

ಉತ್ತರ ಪ್ರದೇಶದಲ್ಲಿ ಸಂಪುಟ ವಿಸ್ತರಣೆ ಮೂಲಕ ಬಿಜೆಪಿ ಜಾತಿ ಸಮೀಕರಣ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 17:14 IST
Last Updated 26 ಸೆಪ್ಟೆಂಬರ್ 2021, 17:14 IST
   

ಲಖನೌ: ಇನ್ನೇನು ಚುನಾವಣೆ ಎದುರಿಸಲಿರುವ ಉತ್ತರಪ್ರದೇಶದಲ್ಲಿ ಬಿಜೆಪಿಯು ಎಲ್ಲಾ ಜಾತಿಗಳ ಓಲೈಕೆಗೆ ಮುಂದಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಜಿತಿನ್ ಪ್ರಸಾದ ಅವರು ಬ್ರಾಹ್ಮಣ ಸಮುದಾಯವನ್ನು ಪ್ರತಿನಿಧಿಸುತ್ತಾರೆ. ಜಿತಿನ್ ಪ್ರಸಾದ ಅವರಿಗೆ ಸಂಪುಟ ದರ್ಜೆಯ ಸ್ಥಾನ ನೀಡಲಾಗಿದೆ. ಬ್ರಾಹ್ಮಣರನ್ನು ಓಲೈಸಲೆಂದೇ ಅವರಿಗೆ ಸ್ಥಾನ ನೀಡಲಾಗಿದೆ.ಪರಿಶಿಷ್ಟ ಜಾತಿಗಳ ಮೂವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿಗಳ ಮೂರು ಬೇರೆ ಬೇರೆ ಸಮುದಾಯಗಳ ಓಲೈಕೆಗೆ ಬಿಜೆಪಿ ಮುಂದಾಗಿದೆ.

ಇತರೆ ಹಿಂದುಳಿದ ವರ್ಗಗಳ ನಾಲ್ವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಜಿತಿನ್ ಪ್ರಸಾದ್ ಅವರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ರಾಜ್ಯ ಸಚಿವರ ಸ್ಥಾನ ನೀಡಲಾಗಿದೆ.

ADVERTISEMENT

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಜಾಟ್ ಸಮುದಾಯದ ದೊಡ್ಡ ಬೆಂಬಲವಿತ್ತು. ಆದರೆ ಈಗ ನೂತನ ಕೃಷಿ ಕಾಯ್ದೆಗಳ ಕಾರಣದಿಂದ ಜಾಟ್ ಸಮುದಾಯವು ಬಿಜೆಪಿಯಿಂದ ದೂರ ಸರಿದಿದೆ. ಕೃಷಿಯೇ ಪ್ರಧಾನ ಕಸುಬಾದ ಈ ಸಮುದಾಯದ ಬಹುತೇಕ ಮಂದಿ ರೈತ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಇದು ಬಿಜೆಪಿಗೆ ಮುಳುವಾಗಬಹುದು. ಈ ಸಂಭಾವ್ಯ ನಷ್ಟವನ್ನು ಸರಿದೂಗಿಸಿಕೊಳ್ಳುವ ಉದ್ದೇಶದಿಂದ ಬಿಜೆಪಿ ಬೇರೆ ಜಾತಿಗಳ ಓಲೈಕೆಗೆ ಮುಂದಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.