ADVERTISEMENT

Assembly polls: ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ

ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಇಂದು ಬಿಜೆಪಿ ಸಿಇಸಿ ಸಭೆ ನಡೆಯಲಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2023, 3:01 IST
Last Updated 20 ಅಕ್ಟೋಬರ್ 2023, 3:01 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಮುಂಬರುವ ತೆಲಂಗಾಣ, ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಇಂದು(ಅ.20) ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆ. ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದೆ.

ಛತ್ತೀಸಗಢದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ 90 ಅಭ್ಯರ್ಥಿಗಳ ಪೈಕಿ 85 ಅಭ್ಯರ್ಥಿಗಳನ್ನು ಘೋಷಿಸಿದೆ. ಮಧ್ಯಪ್ರದೇಶದಲ್ಲಿ 230 ಸ್ಥಾನಗಳಲ್ಲಿ 136 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ರಾಜಸ್ಥಾನದಲ್ಲಿ ವಿಧಾನಸಭೆಯ 200 ಸ್ಥಾನಗಳ ಪೈಕಿ 41 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ADVERTISEMENT

ಅನೇಕ ಲೋಕಸಭಾ ಸಂಸದರು ಮತ್ತು ಮಂತ್ರಿಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ. ಅವರಲ್ಲಿ ಕೇಂದ್ರ ಸಚಿವ ನರೇಂದ್ರ ತೋಮರ್, ಸಂಸದ ಪ್ರಲ್ಹಾದ್ ಪಟೇಲ್ ಮತ್ತು ರಾಜಸ್ಥಾನದ ಲೋಕಸಭಾ ಸಂಸದ ರಾಜ್ಯವರ್ಧನ್ ರಾಥೋಡ್ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.