ADVERTISEMENT

ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 9:23 IST
Last Updated 11 ಜುಲೈ 2025, 9:23 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಭುವನೇಶ್ವರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.

ನಗರದಲ್ಲಿ ನಡೆದ ಪಕ್ಷದ 'ಸಂವಿಧಾನ ಬಚಾವೋ ಸಮಾವೇಶ'ವನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಬಿಜೆಪಿ ಆಡಳಿತದಲ್ಲಿ ದೇಶದ ದಲಿತರು, ಬುಡಕಟ್ಟು ಜನಾಂಗದವರು ಮತ್ತು ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡುವುದನ್ನು ಕಲಿಯಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಪ್ರಯತ್ನಿಸುತ್ತಿದೆ. ದಲಿತರು, ಬುಡಕಟ್ಟು ಜನಾಂಗದವರು ತಮ್ಮ ಹಕ್ಕುಗಳಿಗಾಗಿ ಹೋರಾಡಲು ಕಲಿಯದಿದ್ದರೆ ಬಿಜೆಪಿ ಅವರನ್ನು ನಾಶ ಮಾಡುತ್ತದೆ ಎಂದು ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ADVERTISEMENT

ಒಡಿಶಾದಲ್ಲಿ ಬಿಜೆಪಿ ಬೆಂಬಲಿಗರು, ದಲಿತರು ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.

ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ 160 ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸಿತ್ತು. ಆದರೆ, ಬಿಜೆಪಿ ಸರ್ಕಾರವು ಅವುಗಳಲ್ಲಿ 23 ಉದ್ದಿಮೆಗಳನ್ನು ಖಾಸಗೀಕರಣಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.