ADVERTISEMENT

ಎಸ್‌ಪಿ–ಬಿಎಸ್‌ಪಿ ಮೈತ್ರಿ ಬಿಜೆಪಿಗೆ ಭೀತಿ: ಮಾಯಾವತಿ

ಪಿಟಿಐ
Published 20 ಫೆಬ್ರುವರಿ 2019, 20:34 IST
Last Updated 20 ಫೆಬ್ರುವರಿ 2019, 20:34 IST
ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ
ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ   

ಲಖನೌ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷದ(ಬಿಎಸ್‌ಪಿ) ಮೈತ್ರಿಯಿಂದ ಬಿಜೆಪಿ ಭೀತಿಗೊಂಡಿದೆ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿಶಿವಸೇನಾ ಜತೆಗೆ, ತಮಿಳುನಾಡಿನಲ್ಲಿ ಎಐಎಡಿಎಂಕೆ ಜತೆಗೆ ಬಿಜೆಪಿ ಮೈತ್ರಿ ಘೋಷಿಸಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

‘ಬಿಹಾರ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಮೈತ್ರಿಗೆ ಮುಂದಾಗಿರುವುದು, ಬಿಜೆಪಿಯ ಹತಾಶೆಯನ್ನು ತೋರುತ್ತಿದೆಯೆ? ಚುನಾವಣೆ ವೇಳೆ ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ, ಜನರು ಅವರನ್ನು ಕ್ಷಮಿಸುವುದಿಲ್ಲ.ಬಿಜೆಪಿಯ ಜನವಿರೋಧಿ ನಿಲುವುಗಳಿಂದ ದೇಶದ ಜನತೆ ರೋಸಿಹೋಗಿದ್ದಾರೆ. ಅವರ ಅಹಂಕಾರಕ್ಕೆ ಚುನಾವಣೆಯಲ್ಲಿ ಪೆಟ್ಟು ನೀಡುತ್ತಾರೆ. ಕೇಂದ್ರ ಸರ್ಕಾರ ಉರುಳುತ್ತದೆ’ ಎಂದು ಮಾಯಾವತಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.