ADVERTISEMENT

ಉಪಚುನಾವಣೆಗಾಗಿ ಉದ್ಯೋಗ ಖಾತ್ರಿ ಅನುದಾನ ದುರುಪಯೋಗ: ಕಾಂಗ್ರೆಸ್‌

ಮಧ್ಯಪ್ರದೇಶದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

ಪಿಟಿಐ
Published 22 ಜೂನ್ 2020, 12:25 IST
Last Updated 22 ಜೂನ್ 2020, 12:25 IST
.
.   

ಭೋಪಾಲ್‌: ಮಧ್ಯಪ್ರದೇಶದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುದಾನವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ರಾಜ್ಯದ 24 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗಳನ್ನು ಗೆಲ್ಲುವುದಕ್ಕಾಗಿ ಈ ಅನುದಾನ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್‌ ಶಾಸಕ ಗೋವಿಂದ್‌ ಸಿಂಗ್‌ ದೂರಿದ್ದಾರೆ.

ಉದ್ಯೋಗ ಸೃಷ್ಟಿಸುವ ಯೋಜನೆಗಳನ್ನು ಕೈಗೊಳ್ಳುವ ಬದಲು ಮತದಾರರನ್ನು ಸೆಳೆಯುವ ತಂತ್ರಗಳನ್ನು ಮಾಡಲಾಗುತ್ತಿದೆ. ಅನುದಾನ ದುರುಪಯೋಗದ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಮುಖ್ಯ ಕಾರ್ಯದರ್ಶಿ ಕ್ರಮಕೈಗೊಳ್ಳದಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಸಿಂಗ್‌ ತಿಳಿಸಿದ್ದಾರೆ.

ADVERTISEMENT

ಕಾಂಗ್ರೆಸ್‌ ಆರೋಪದಲ್ಲಿ ಹುರುಳಿಲ್ಲ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

230 ಸದಸ್ಯರನ್ನು ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ 22 ಶಾಸಕರು ಮಾರ್ಚ್‌ ತಿಂಗಳಲ್ಲಿ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಇನ್ನಿಬ್ಬರು ಶಾಸಕರು ನಿಧನರಾಗಿದ್ದಾರೆ. ಹೀಗಾಗಿ, 24 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಆದರೆ, ಉಪಚುನಾವಣೆಗೆ ದಿನಾಂಕ ನಿಗದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.