
ಭಾಗಲ್ಪುರ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಹಲ್‌ಗಾಂವ್ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ವಿರುದ್ಧವೇ ಕಣಕ್ಕಿಳಿದಿದ್ದ ಬಿಜೆಪಿ ಶಾಸಕ ಪವನ್ ಯಾದವ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಕಹಲ್‌ಗಾಂವ್ ಕ್ಷೇತ್ರದ ಶಾಸಕ ಪವನ್ ಯಾದವ್ ಸೇರಿದಂತೆ 6 ಜನರನ್ನು ಪಕ್ಷದ ಸಾಮಾನ್ಯ ಸದಸ್ಯತ್ವದಿಂದಲೇ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕ ಭಾನುವಾರ ತಿಳಿಸಿದೆ.
‘ಉಚ್ಚಾಟಿಸಲ್ಪಟ್ಟ 6 ಜನರು ಕೂಡ ಕಹಲ್‌ಗಾಂವ್ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯ ವಿರುದ್ಧ ಚಟುವಟಿಕೆಯಲ್ಲಿ ತೊಡಗಿದ್ದರು. ಪಕ್ಷ ವಿರೋಧಿ ಕೆಲಸದಲ್ಲಿ ತೊಡಗಿದ್ದ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ’ ಎಂದು ಹೇಳಿದೆ.
ಬಿಜೆಪಿ ಪಕ್ಷವು ಶಾಸಕ ಪವನ್ ಯಾದವ್ ಅವರಿಗೆ ಕಹಲ್‌ಗಾಂವ್ ಕ್ಷೇತ್ರದ ಟಿಕೆಟ್ ನೀಡಲು ನಿರಾಕರಿಸಿತ್ತು. ಹಾಗಾಗಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನ. 14 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.