
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ.
ಚಿತ್ರ: ಪಿಟಿಐ
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿರುವ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ವಜಾಗೊಳಿಸುವಂತೆ ಬಿಜೆಪಿ ನೋಟಿಸ್ ಸಲ್ಲಿಸಿದೆ.
ರಾಹುಲ್ ಗಾಂಧಿ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯಕ್ಕೆ ಬಿಜೆಪಿ ಸಂಸದರು ಸಿದ್ಧತೆ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಕಟುವಾಗಿ ಟೀಕಿಸಿದ ಒಂದು ದಿನದ ಬಳಿಕ ಬಿಜೆಪಿ ಈ ನಿಲುವು ತೆಗೆದುಕೊಂಡಿದೆ.
ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಅವರ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯ (Privilege Motion) ಮಂಡಿಸಲು ಸಿದ್ಧತೆ ನಡೆಸಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.