ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ದೇಶದ ಹೆಸರು ಕೆಡಿಸಲು ಕಾಂಗ್ರೆಸ್ ಪಕ್ಷವು ಟೂಲ್‌ಕಿಟ್ ಮೂಲಕ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಬಿಜೆಪಿ ಮಾಡುತ್ತಿರುವ ಆರೋಪ ಸುಳ್ಳು ಈ ಬಗ್ಗೆ ದೂರು ದಾಖಲಿಸುತ್ತೇವೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು, ಕಾಂಗ್ರೆಸ್ ಪಕ್ಷವುಕೋವಿಡ್ ಪರಿಸ್ಥಿತಿಯನ್ನು ಕೆಟ್ಟದಾಗಿ ನಿರ್ವಹಿಸಲಾಗಿದೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದರು.ಜೊತೆಗೆ ಕೊರೊನಾವೈರಸ್‌ನ ಹೊಸ ರೂಪಾಂತರವನ್ನು ʼಮೋದಿ ತಳಿʼ ಎನ್ನುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದೂ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ಸುಳ್ಳು. ಪಾತ್ರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹೇಳಿದೆ.
ಬಿಜೆಪಿಯು ಕೋವಿಡ್-19 ಕಳಪೆ ನಿರ್ವಹಣೆಯ ಬಗ್ಗೆ ಸುಳ್ಳು ಟೂಲ್‌ಕಿಟ್ ಪ್ರಚಾರ ಮಾಡುತ್ತಿದೆ ಮತ್ತು ಎಐಸಿಸಿ ಸಂಶೋಧನಾ ಇಲಾಖೆ ವಿರುದ್ಧ ಆರೋಪಿಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ವಿರುದ್ಧ ಎಫ್‌ಐಆರ್ ದಾಖಲಿಸುತ್ತೇವೆ. ದೇಶವು ಕೋವಿಡ್‌ನಿಂದಾಗಿ ತತ್ತರಿಸುತ್ತಿರುವ ಹೊತ್ತಿನಲ್ಲಿ, ಪರಿಹಾರ ಕಾರ್ಯಾಚರಣೆ ನಡೆಸುವ ಬದಲು ಬಿಜೆಪಿಯುನಾಚಿಕೆಯಿಲ್ಲದೆ ಸುಳ್ಳು ಪತ್ರಗಳನ್ನು ಸೃಷ್ಟಿಸುತ್ತಿದೆʼ ಎಂದು ಕಾಂಗ್ರೆಸ್ ವಕ್ತಾರ ಮತ್ತು ಎಐಸಿಸಿ ಸಂಶೋಧನಾ ವಿಭಾಗದ ರಾಜೀವ್ ಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.