ADVERTISEMENT

ಪಂಜಾಬ್ ಚುನಾವಣೆ: ಬಿಜೆಪಿ ಜೊತೆ ಅಮರಿಂದರ್ ಮೈತ್ರಿ; ಅಧಿಕೃತ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2021, 9:55 IST
Last Updated 27 ಡಿಸೆಂಬರ್ 2021, 9:55 IST
ಚಿತ್ರ ಕೃಪೆ: ಅಮೆರಿಂದರ್ ಸಿಂಗ್ (ಟ್ವಿಟರ್)
ಚಿತ್ರ ಕೃಪೆ: ಅಮೆರಿಂದರ್ ಸಿಂಗ್ (ಟ್ವಿಟರ್)   

ನವದೆಹಲಿ: ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ 'ಪಂಜಾಬ್ ಲೋಕ ಕಾಂಗ್ರೆಸ್' ಹಾಗೂ ಸುಖದೇವ್ ಸಿಂಗ್ ದಿಂಡ್ಸಾ ಅವರ ಶಿರೋಮಣಿ ಅಕಾಲಿ ದಳ (ಸಂಯುಕ್ತ) ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಬಿಜೆಪಿ ಅಧಿಕೃತವಾಗಿ ಘೋಷಿಸಿದೆ.

ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೋಮವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಈ ಕುರಿತು ಟ್ವೀಟ್ ಮಾಡಿರುವ ಅಮರಿಂದರ್ ಸಿಂಗ್, 'ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಕುರಿತಾಗಿ ಮಾತುಕತೆ ನಡೆಸಲಾಯಿತು. ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡುವ ಗುರಿ ಹೊಂದಿದ್ದೇವೆ' ಎಂದು ಹೇಳಿದ್ದಾರೆ.

ಕಾಂಗ್ರೆಸ್ ಜೊತೆಗಿನ ಭಿನ್ನಮತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಮರಿಂದರ್ ಸಿಂಗ್ ಪಕ್ಷವನ್ನು ತೊರೆದಿದ್ದರು. ಬಳಿಕ ಹೊಸತಾದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ರೂಪಿಸಿದ್ದರು.

ಈ ಮೂರು ಪಕ್ಷಗಳು ಜಂಟಿಯಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.