
ನವದೆಹಲಿ: ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಸಜ್ಜಾಗಿರುವ ಬಿಜೆಪಿಯು ಅದರ ಭಾಗವಾಗಿ ಹಲವು ರಾಜ್ಯಗಳ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಿಸಲು ನಿರ್ಧರಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಬಿಜೆಪಿಯ ಸಂವಿಧಾನದಂತೆ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲು 37 ಸಂಘಟನಾ ರಾಜ್ಯ ಘಟಕಗಳ ಪೈಕಿ 19 ಘಟಕಗಳಿಗೆ ಅಧ್ಯಕ್ಷರನ್ನು ನೇಮಿಸಿರಬೇಕು. ಈಗಾಗಲೇ 15 ರಾಜ್ಯಗಳಿಗೆ ನೇಮಕ ಆಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಗುಜರಾತ್‌ನಂತಹ ದೊಡ್ಡ ರಾಜ್ಯಗಳಿಗೆ ಅಧ್ಯಕ್ಷರ ಆಯ್ಕೆ ಬಾಕಿ ಇದೆ. ಆರ್‌ಎಸ್‌ಎಸ್ ಮತ್ತು ಪಕ್ಷದ ಸೈದ್ಧಾಂತಿಕ ಸದಸ್ಯರ ಜೊತೆ ಈಗಾಗಲೇ ಚರ್ಚೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಿರಿಯ ನಾಯಕರು ನಾಲ್ಕೈದು ದಿನಗಳಿಂದ ಸಮಾಲೋಚನೆ ನಡೆಸಿದ್ದಾರೆ.
‘ರಾಜ್ಯಗಳ ಅಧ್ಯಕ್ಷರ ಆಯ್ಕೆ ಮುಗಿಯುತ್ತಿದ್ದಂತೆ ನಡ್ಡಾ ಅವರ ಸ್ಥಾನ ತುಂಬಲಾಗುವುದು. ಈ ವರ್ಷಾಂತ್ಯಕ್ಕೆ ಬಿಹಾರ ಚುನಾವಣೆ ಇದೆ. ಮುಂದಿನ ವರ್ಷ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳಕ್ಕೆ ಚುನಾವಣೆ ಇದ್ದು, ಅದನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಆಗಲಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
2020ರ ಫೆಬ್ರುವರಿಯಲ್ಲಿ ಅಧ್ಯಕ್ಷರಾಗಿದ್ದ ನಡ್ಡಾ ಅವರನ್ನು ಮೂರು ವರ್ಷಗಳ ಅವಧಿ ಮುಗಿದ ನಂತರವೂ ಮುಂದುವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.