ADVERTISEMENT

ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ: 46ರ ಪೈಕಿ 38ರಲ್ಲಿ ಬಿಜೆಪಿಗೆ ಅಧಿಕಾರ

ಪಿಟಿಐ
Published 30 ಸೆಪ್ಟೆಂಬರ್ 2022, 16:25 IST
Last Updated 30 ಸೆಪ್ಟೆಂಬರ್ 2022, 16:25 IST
   

ಭೋಪಾಲ್: ಮಧ್ಯಪ್ರದೇಶದ ಸ್ಥಳೀಯ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಜಯಭೇರಿ ಬಾರಿಸಿದೆ. 814 ಕ್ಷೇತ್ರಗಳ ಪೈಕಿ 417ರಲ್ಲಿ ಗೆಲುವು ಸಾಧಿಸಿದೆ.

46 ಸ್ಥಳೀಯ ಸಂಸ್ಥೆಗಳ ಪೈಕಿ 38ರಲ್ಲಿ ಬಿಜೆಪಿ ಬಹುಮತ ಪಡೆದಿದೆ. ಮಂಗಳವಾರ ಚುನಾವಣೆ ನಡೆದಿತ್ತು.

ಉಳಿದಂತೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 250, ಸ್ವತಂತ್ರ ಅಭ್ಯರ್ಥಿಗಳು 131, ಆಮ್ ಆದ್ಮಿ 7, ಜಿಜಿಪಿ 6 ಮತ್ತು ಬಿಎಸ್‌ಪಿ ಪಕ್ಷ 3 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. 18 ಜಿಲ್ಲೆಗಳಲ್ಲಿ ನಡೆದ ಚುನಾವಣೆಯಲ್ಲಿ ಶೇಕಡ 72.60ರಷ್ಟು ಮತದಾನ ನಡೆದಿತ್ತು. 25 ಕಾರ್ಪೊರೇಟರ್‌ಗಳು ಅವಿರೋಧವಾಗಿ ಆಯ್ಕೆಯಾಗಿದ್ದರು.

ADVERTISEMENT

17 ನಗರ ಪಾಲಿಕೆ ಮತ್ತು 29 ನಗರಪಾಲಿಕೆಗೆ ನಡೆದ ಚುನಾವಣೆಯಲ್ಲಿ 3,397 ಅಭ್ಯರ್ಥಿಗಳು ಕಣದಲ್ಲಿದ್ದರು.

ಗೆದ್ದ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲನಾಥ್ ಶುಭಾಶಯ ಹೇಳಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.