ADVERTISEMENT

ಬಿಜೆಪಿ ಸರ್ಕಾರ ಅಂಬೇಡ್ಕರ್‌ ಪರಂಪರೆಯನ್ನು ಸಂಪೂರ್ಣ ನಿರ್ಲಕ್ಷಿಸಿದೆ: ಎಎಪಿ

ಪಿಟಿಐ
Published 14 ಏಪ್ರಿಲ್ 2025, 3:07 IST
Last Updated 14 ಏಪ್ರಿಲ್ 2025, 3:07 IST
<div class="paragraphs"><p>ಎಎಪಿ ಮತ್ತು ಬಿಜೆಪಿ</p></div>

ಎಎಪಿ ಮತ್ತು ಬಿಜೆಪಿ

   

ನವದೆಹಲಿ: ಬಿಜೆಪಿ ನೇತೃತ್ವದ ದೆಹಲಿ ಸರ್ಕಾರ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪರಂಪರೆಯನ್ನು ಸಂಪೂರ್ಣ ನಿರ್ಲಕ್ಷಿಸಿದೆ. ದಲಿತ ವಿದ್ಯಾರ್ಥಿಗಳಿಗೆ ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್‌ ಭಾರದ್ವಾಜ್‌ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ, ಸಚಿವರು ಮತ್ತು ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಹೊಂದಿರುವುದು ಕಡ್ಡಾಯವಾಗಿತ್ತು. ಆದರೆ, ಬಿಜೆಪಿ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿನ ಅಂಬೇಡ್ಕರ್‌ ಅವರ ಭಾವಚಿತ್ರಗಳನ್ನು ತೆಗೆದು ಹಾಕಿದೆ’ ಎಂದು ಹೇಳಿದ್ದಾರೆ.

ADVERTISEMENT

‘ವಿದ್ಯಾರ್ಥಿ ವೇತನ ಮತ್ತು ಆರ್ಥಿಕ ಅನುದಾನ ಸೇರಿದಂತೆ ಪರಿಶಿಷ್ಟ ಜಾತಿ (ಎಸ್‌ಸಿ) ವಿದ್ಯಾರ್ಥಿಗಳಿಗೆ ನೀಡಿದ್ದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಎಲ್ಲಾ ದಲಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ಮತ್ತು ಮಾಸಿಕ ಗೌರವ ಧನ ನೀಡುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಭಾರದ್ವಾಜ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.