ADVERTISEMENT

‘ಇಂಡಿಯಾ’ ಅಧಿಕಾರಕ್ಕೆ; 10ರಿಂದ 15 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಪತನ: ಖೇರಾ

ಪಿಟಿಐ
Published 2 ಮೇ 2024, 13:37 IST
Last Updated 2 ಮೇ 2024, 13:37 IST
<div class="paragraphs"><p>ಪವನ್‌ ಖೇರಾ</p></div>

ಪವನ್‌ ಖೇರಾ

   

ಪಣಜಿ: ಈ ಬಾರಿಯ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, 10 ರಿಂದ 15 ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪವನ್‌ ಖೇರಾ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಾಂತರವನ್ನು ರದ್ದುಗೊಳಿಸಲು ಮತ್ತು ಪಕ್ಷಗಳನ್ನು ಬದಲಾಯಿಸುವ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಸಂವಿಧಾನದ 10ನೇ ಷೆಡ್ಯೂಲ್‌ಗೆ ತಿದ್ದುಪಡಿಯನ್ನು ಇಂಡಿಯಾ ಮೈತ್ರಿಕೂಟ ಮಾಡಲಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಪಕ್ಷಾಂತರಿಗಳನ್ನು ಅನರ್ಹಗೊಳಿಸಲಾಗುವುದು. ಜುಲೈ 4ರಂದು ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸರ್ಕಾರ ಪತನಗೊಳ್ಳಲಿದೆ. ದೇಶದಾದ್ಯಂತ ಪಕ್ಷಾಂತರದಲ್ಲಿ ತೊಡಗುವ ಮೂಲಕ ಬಿಜೆಪಿ, ಪ್ರಜಾಪ್ರಭುತ್ವವನ್ನು ಅಣಕಿಸಿದೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿದ ಖೇರಾ, ಇದು ವಿಶ್ವದ ಅತಿದೊಡ್ಡ ಲೈಂಗಿಕ ಶೋಷಣೆ ಪ್ರಕರಣವಾಗಿದೆ. ಪ್ರಜ್ವಲ್‌ ಅವರ ಪಾಸ್‌ ಪೋರ್ಟ್‌ ರದ್ದುಪಡಿಸಿ ಭಾರತಕ್ಕೆ ಕರೆತಂದು ಪೊಲೀಸರಿಗೆ ಒಪ್ಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಎಲ್ಲರೂ ಈ ಘಟನೆಯನ್ನು ಖಂಡಿಸಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.