ADVERTISEMENT

ಲೋಕಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭೆ ಚುನಾವಣೆ 2024ಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮಾರ್ಚ್ 2024, 13:25 IST
Last Updated 2 ಮಾರ್ಚ್ 2024, 13:25 IST
   

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆ 2024ಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ನಾಯಕರು ಪಟ್ಟಿ ಬಿಡುಗಡೆ ಮಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು.

ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ADVERTISEMENT

195 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಬಿಜೆಪಿ ಘೋಷಣೆ ಮಾಡಿದೆ. ಇದರಲ್ಲಿ 28 ಮಹಿಳೆಯರಿಗೆ ಟಿಕೆಟ್ ಸಿಕ್ಕಿರುವುದು ಗಮನ ಸೆಳೆದಿದೆ. 34 ಕೇಂದ್ರ ಸಚಿವರಿಗೆ ಟಿಕೆಟ್ ಲಭಿಸಿದೆ. 47 ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದೆ. ಇಬ್ಬರು ಮಾಜಿ ಸಿಎಂಗಳಿಗೆ ಲೋಕಸಭೆಗೆ ಸ್ಪರ್ಧಿಸಲು ಹಸಿರು ನಿಶಾನೆ ತೋರಿಸಲಾಗಿದೆ.

ಪಟ್ಟಿಯ ಪ್ರಕಾರ ವಾರಾಣಸಿಯಿಂದ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ಸ್ಪರ್ಧಿಸಲಿದ್ದಾರೆ. ಗುಜರಾತ್‌ನ ಗಾಂಧಿನಗರದಿಂದ ಗೃಹ ಸಚಿವ ಅಮಿತ್ ಶಾ ಅವರು ಸ್ಪರ್ಧಿಸಲಿದ್ದಾರೆ. ರಾಜನಾಥ್ ಸಿಂಗ್ ಲಖನೌದಿಂದ ಸ್ಪರ್ಧಿಸಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಬರೋಬ್ಬರಿ 51 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ.

ಹಲವು ನಾಯಕರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಸಿಕ್ಕಿದೆ. ಮುಂದಿನ ವಾರದಲ್ಲಿ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡುವ ಸಂಭವ ಇದೆ.

ಕರ್ನಾಟಕದಲ್ಲಿ ಯಾರಾರಿಗೆ ಟಿಕೆಟ್?

ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವ ಕ್ಷೇತ್ರಗಳಿಗೂ ಬಿಜೆಪಿ ಟಿಕೆಟ್ ಘೋಷಣೆಯಾಗಿಲ್ಲ. ರಾಜ್ಯಸಭೆ ಸದಸ್ಯರಾಗಿದ್ದ ರಾಜೀವ್ ಚಂದ್ರಶೇಖರ್ ಅವರಿಗೆ ತಿರುವನಂತಪುರಂ ಲೋಕಸಭೆ ಟಿಕೆಟ್ ನೀಡಲಾಗಿದೆ.

ಉತ್ತರ ಪ್ರದೇಶ 51

ಪಶ್ಚಿಮ ಬಂಗಾಳ 20

ಮಧ್ಯಪ್ರದೇಶ 24

ಗುಜರಾತ್ 15

ರಾಜಸ್ಥಾನ 15

ಕೇರಳ 12

ತೆಲಂಗಾಣ 9

ಅಸ್ಸಾಂ 11

ಜಾರ್ಖಂಡ್ 11

ಚತ್ತೀಸಗಢ 11

ದೆಹಲಿ 5

ಜಮ್ಮು ಮತ್ತು ಕಾಶ್ಮೀರ 2

ಉತ್ತರಾಖಂಡ 3

ಅಂಡಮಾನ್ ನಿಕೋಬಾರ್ 1

ಡಮನ್ ಮತ್ತು ಡಿಯೂ 1

ಅರುಣಾಚಲಪ್ರದೇಶ 2

ಗೋವಾ 1

ತ್ರಿಪುರಾ 1

***

ಒಬಿಸಿ 57

ಎಸ್‌ಸಿ 27

ಎಸ್‌ಟಿ 18

****

195 ಕ್ಷೇತ್ರಗಳಿಗೆ ಘೋಷಣೆಯಾಗಿರುವ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.