ADVERTISEMENT

ಪಶ್ಚಿಮ ಬಂಗಾಳ | ಮಹಿಳೆಯರಿಗೆ ಬಾರ್‌ಗಳಲ್ಲಿ ಕೆಲಸ ಮಾಡಲು ಅವಕಾಶ: BJP ಪ್ರತಿಭಟನೆ

ಪಿಟಿಐ
Published 22 ಮಾರ್ಚ್ 2025, 12:45 IST
Last Updated 22 ಮಾರ್ಚ್ 2025, 12:45 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

ಕೋಲ್ಕತ್ತ: ಬಾರ್‌ಗಳಲ್ಲಿ ಮಹಿಳೆಯರಿಗೆ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆ ಅಂಗೀಕರಿಸಿರುವುದನ್ನು ವಿರೋಧಿಸಿ ಬಿಜೆಪಿ ಮಹಿಳಾ ಘಟಕ ಇಂದು (ಶನಿವಾರ) ಪ್ರತಿಭಟನೆ ನಡೆಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮಹಿಳಾ ಘಟಕದ ನಾಯಕಿ ಫಲ್ಗುಣಿ ಪಾತ್ರಾ, ‘ರಾಜ್ಯದಲ್ಲಿ ಮಹಿಳೆಯರಿಗೆ ತೃಣಮೂಲ ಕಾಂಗ್ರೆಸ್‌ ಸರ್ಕಾರ ಉದ್ಯೋಗಾವಕಾಶಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಲೇ ಪಕ್ಷವು ಇಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ಹೇಳಿದ್ದಾರೆ.

ADVERTISEMENT

‘ರಾಜ್ಯದಲ್ಲಿನ ಮಹಿಳೆಯರಿಗೆ ಜೀವನದ ವಿವಿಧ ಕ್ಷೇತ್ರಗಳಲ್ಲಿ ಭದ್ರತೆ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈಗ ಅವರ ಸುರಕ್ಷತೆಗೆ ಅಪಾಯವಿರುವ ಸ್ಥಳಗಳಲ್ಲಿ ಕೆಲಸ ಮಾಡಲು ಅವರನ್ನು ಒತ್ತಾಯಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

1909ರ ಪಶ್ಚಿಮ ಬಂಗಾಳ ಅಬಕಾರಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮಹಿಳೆಯರು ಬಾರ್‌ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆ ಬುಧವಾರ ಅಂಗೀಕರಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.