
ನವದೆಹಲಿ: ಉತ್ತರ ಪ್ರದೇಶದಲ್ಲಿ ಒಂದು ಕಾಲದಲ್ಲಿ ಉನ್ನತ ಸ್ಥಿತಿಯಲ್ಲಿದ್ದ ಸಕ್ಕರೆ ಉದ್ಯಮವನ್ನು ಬಿಜೆಪಿ ನಿರ್ಲಕ್ಷಿಸಿತು ಮತ್ತು ಕಬ್ಬಿನ ಬೆಲೆ ಹೆಚ್ಚಳ ಮಾಡಬೇಕೆನ್ನುವ ರೈತರ ಬೇಡಿಕೆಯನ್ನು ಕಿವಿಗೆ ಹಾಕಿಕೊಳ್ಳಲಿಲ್ಲ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.
ಉತ್ತರ ಪ್ರದೇಶದ ಶ್ರಾವಸ್ತಿ ಮತ್ತು ಬಸ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ.
‘ಶ್ರಾವಸ್ತಿಯಲ್ಲಿ ಉತ್ತರ ಪ್ರದೇಶದಲ್ಲಿಯೇ ಅತಿ ಹೆಚ್ಚು ಶಿಶು ಮರಣ ಪ್ರಮಾಣ ದಾಖಲಾಗುತ್ತಿರುವುದು ಏಕೆ? ಬಸ್ತಿಯ 189 ಪ್ರಾಥಮಿಕ ಶಾಲೆಗಳನ್ನು ಬಳಕೆಗೆ ಅನರ್ಹ ಎಂದು ಘೋಷಿಸಿರುವುದು ಏಕೆ? ಬಸ್ತಿಯ ಸಕ್ಕರೆ ಮಿಲ್‌ಗಳನ್ನು ಮತ್ತು ಕಬ್ಬು ಬೆಳೆಗಾರರನ್ನು ಬಿಜೆಪಿ ನಿರ್ಲಕ್ಷಿಸಿದ್ದು ಏಕೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಶ್ರಾವಸ್ತಿಯು ಭಾರತದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದ್ದು, ಇಲ್ಲಿನ ಬಿಕ್ಕಟ್ಟನ್ನು ಎದುರಿಸಲು ಬಿಜೆಪಿಯ ಯೋಜನೆ ಏನು’ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.