ADVERTISEMENT

ಗಾಂಧೀಜಿ ಕನಸು ನನಸು ಮಾಡಲು ಬಿಜೆಪಿಯಿಂದ ಪ್ರಾಮಾಣಿಕ ಪ್ರಯತ್ನ: ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 28 ಮೇ 2022, 7:16 IST
Last Updated 28 ಮೇ 2022, 7:16 IST
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ    

ರಾಜ್‌ಕೋಟ್‌: ಮಹಾತ್ಮ ಗಾಂಧಿ, ಸರ್ದಾರ್‌ ಪಟೇಲ್‌ ಅವರ ಕನಸನ್ನು ನನಸು ಮಾಡಲು ಬಿಜೆಪಿ ಸರ್ಕಾರ ಕಳೆದ 8 ವರ್ಷಗಳಿಂದ ಪ್ರಾಮಾಣಿಕ ಪಯತ್ನ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತ್‌ನ ರಾಜಕೋಟ್‌ನಲ್ಲಿ ನೂತನ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಅವರು ಜನರನ್ನು ಉದ್ದೇಶಿಸಿ ಶನಿವಾರ ಮಾತನಾಡಿದರು.

ಕೋವಿಡ್‌ಹಾಗೂ ಇತ್ತೀಚಿನ ರಷ್ಯಾ–ಉಕ್ರೇನ್‌ ಯುದ್ಧದ ಸಂದರ್ಭದಲ್ಲೂ ನಾವು ದೇಶವನ್ನು ಉತ್ತಮವಾಗಿ ಮುನ್ನಡೆಸಿದ್ದೇವೆ. ನಮ್ಮ ಸೇವೆಯು ದೇಶದ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ADVERTISEMENT

ಬಿಜೆಪಿ ಸರ್ಕಾರ ಬಡವರ ಸೇವೆ ಮಾಡುತ್ತಿದೆ. ಗುಜರಾತ್‌ನಲ್ಲಿ ನಾವು 30 ಮೆಡಿಕಲ್‌ ಕಾಲೇಜ್‌ ಸ್ಥಾಪನೆ ಮಾಡಿದ್ದೇವೆ. ಇದೆಲ್ಲಾಬಡ ಜನರ ಸೇವೆಗಾಗಿ ಮಾಡಲಾಗಿದೆ ಎಂದು ಮೋದಿ ಹೇಳಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಯೋಜನೆಗಳನ್ನು ತಡೆಯಲಾಗಿತ್ತು. ಅವರು ದ್ವೇಷದ ರಾಜಕಾರಣ ಮಾಡಿದರು. ಬಡವರ ಕಲ್ಯಾಣದ ಯೋಜನೆಗಳನ್ನು ಅವರು ತಡೆ ಹಿಡಿದರು ಎಂದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.

ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳು ತಮ್ಮಮಕ್ಕಳು ಕೂಡ ವೈದ್ಯರಾಗಬೇಕೆಂದು ಬಯಸುತ್ತಾರೆ. ಆದರೆ ಅವರಿಗೆ ಎದುರಾಗುವ ಮೊದಲ ಸಮಸ್ಯೆ ಇಂಗ್ಲಿಷ್‌ ಭಾಷೆ.ಪ್ರತಿಭೆ ಇದ್ದರೂ ಇಂಗ್ಲಿಷ್‌ ಕಾರಣಕ್ಕೆ ಅಂತಹ ಮಕ್ಕಳು ಮೆಡಿಕಲ್‌ನಿಂದ ಹಿಂದೆ ಸರಿಯುವುದು ಅನ್ಯಾಯವೇ ಸರಿ. ಇಂತಹನಿಯಮಗಳನ್ನು ಬದಲಾಯಿಸಿದ್ದೇವೆ ಮತ್ತುಗುಜರಾತಿ ಶೈಕ್ಷಣಿಕ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣ ಪಡೆಯಬಹುದು.

ಇಂತಹ ಬದಲಾವಣೆಗಳನ್ನು ಮಾಡಿ ದೇಶದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಿದ್ದೇವೆ ಎಂದು ಹೇಳಿದರು. ಇದೇ ದಿನ ಸಂಜೆ 4 ಗಂಟೆಗೆ ಅವರು ಮತ್ತೊಂದು ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಲಿದ್ದಾರೆ.

ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮೋದಿ ಅವರು ಭೇಟಿ ಹೆಚ್ಚು ಮಹತ್ವ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.