ADVERTISEMENT

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನೆಲಸಮ ಮಾಡದೆ ವಿರಮಿಸುವುದಿಲ್ಲ: ಅಮಿತ್ ಶಾ

ಪಿಟಿಐ
Published 5 ಮೇ 2022, 16:02 IST
Last Updated 5 ಮೇ 2022, 16:02 IST
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ   

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಅಧಿಕಾರದಿಂದ ಬುಡಸಮೇತ ಕಿತ್ತೊಗೆಯುವವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಹೇಳಿದ್ದಾರೆ.

ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿನ ಭ್ರಷ್ಟಾಚಾರ, ರಾಜಕೀಯ ಗಲಭೆಗಳ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

ಬಂಗಾಳದಲ್ಲಿ ಟಿಎಂಸಿ, ನಾಗರಿಕ ತಿದ್ದುಪಡಿ ಕಾಯ್ದೆಯ ಕುರಿತು ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲವನ್ನು ಮೂರರಿಂದ 77ಕ್ಕೆ ಏರಿಕೆ ಮಾಡಿರುವುದಕ್ಕೆ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಟಿಎಂಸಿಯ ಆಡಳಿತವನ್ನು ಕೊನೆಗಾಣಿಸುವುದು ಬಿಜೆಪಿಯ ಗುರಿಯಾಗಿದೆ ಎಂದು ಶಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.