ADVERTISEMENT

ವೃದ್ಧನ ಹತ್ಯೆ ಪ್ರಕರಣ: ಪಶ್ಚಿಮಬಂಗಾಳದ ಸ್ಥಳೀಯ ಬಿಜೆಪಿ ನಾಯಕ ಸೇರಿ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 7:42 IST
Last Updated 21 ಮಾರ್ಚ್ 2021, 7:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬರ್ಧಮಾನ್‌: ‘ಪಶ್ಚಿಮ ಬಂಗಾಳದ ಪೂರ್ಬಾ ಬರ್ಧಮಾನ್‌ ಜಿಲ್ಲೆಯಲ್ಲಿ 74 ವರ್ಷದ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಮುಖಂಡ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಶನಿವಾರ ತಿಳಿಸಿದರು.

‘ಈ ‍ಪ್ರಕರಣ ಸಂಬಂಧ ಶುಕ್ರವಾರ ಮೂವರನ್ನು ಬಂಧಿಸಲಾಗಿದ್ದು, ಅವರನ್ನುಶನಿವಾರ ಸ್ಥಳೀಯ ನ್ಯಾಯಾಲಕ್ಕೆ ಹಾಜರುಪಡಿಸಲಾಯಿತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲವು ಆರೋಪಿಗಳನ್ನು 10 ದಿನಗಳ ಮಟ್ಟಿಗೆ ಪೊಲೀಸರ ವಶಕ್ಕೆ ನೀಡಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.

ಮಾರ್ಚ್ 9 ರಂದು ಪಾರಾ ಅಂಚೆ ಕಚೇರಿ ಬಳಿ ವೃದ್ಧರೊಬ್ಬರನ್ನು ಅವರದ್ದೇ ಮನೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ADVERTISEMENT

‘ಈ ಘಟನೆ ನಡೆದ ದಿನವೇ ವೃದ್ಧ, ಬ್ಯಾಂಕಿನಿಂದ ಹಣ ತೆಗೆದುಕೊಂಡು ಬಂದಿದ್ದರು. ಹಾಗಾಗಿ ಹಣಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

‘ಆಕಸ್ಮಿಕವಾಗಿ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದೇವೆ. ಇದರಿಂದ ಭಯಭೀತಗೊಂಡ ನಾವು ಹಣವನ್ನು ಅಲ್ಲೇ ಬಿಟ್ಟು ಹೋಗಿದ್ದೇವೆ’ ಎಂದು ಆರೋಪಿಗಳು ಹೇಳಿದ್ದಾರೆ.

ತನ್ನ ಮೇಲಿನ ಆರೋಪಗಳನ್ನು ತಲ್ಲಿ ಹಾಕಿರುವ ಬಿಜೆಪಿ ನಾಯಕ, ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.