ADVERTISEMENT

ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್‌ ಗೋವಾದಲ್ಲಿ ನಿಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಆಗಸ್ಟ್ 2022, 6:01 IST
Last Updated 23 ಆಗಸ್ಟ್ 2022, 6:01 IST
2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಸೊನಾಲಿ ಫೋಗಟ್‌ (ಪಿಟಿಐ ಸಂಗ್ರಹ ಚಿತ್ರ)
2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಸೊನಾಲಿ ಫೋಗಟ್‌ (ಪಿಟಿಐ ಸಂಗ್ರಹ ಚಿತ್ರ)   

ಪಣಜಿ: ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್‌ (42) ಸೋಮವಾರ ರಾತ್ರಿ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹರಿಯಾಣ ಬಿಜೆಪಿ ನಾಯಕಿ ಸೊನಾಲಿ ಫೋಗಟ್‌ ಗೋವಾದಲ್ಲಿ ಸಾವಿಗೀಡಾಗಿರುವುದನ್ನು ಗೋವಾ ಡಿಜಿಪಿ ಜಸ್‌ಪಾಲ್ ಸಿಂಗ್ ಖಚಿತಪಡಿಸಿದ್ದಾರೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಸೊನಾಲಿ ಅವರು 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್‌ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಕುಲ್‌ದೀಪ್‌ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು.

ADVERTISEMENT

ಟಿಕ್ ಟಾಕ್‌ನಲ್ಲಿ ಜನಪ್ರಿಯರಾಗಿದ್ದ ಸೊನಾಲಿ ಫೋಗಟ್‌, 14ನೇ ಆವೃತ್ತಿಯ ‘ಬಿಗ್‌ಬಾಸ್’ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.