ADVERTISEMENT

ಮಮತಾಗೆ ಬೆದರಿಕೆ ಹಾಕಿದ್ದ ಬಿಜೆಪಿ ನಾಯಕ ಅನುಪಮ್ ಹಝ್ರಾಗೆ ಕೋವಿಡ್‌

ಪಿಟಿಐ
Published 2 ಅಕ್ಟೋಬರ್ 2020, 12:31 IST
Last Updated 2 ಅಕ್ಟೋಬರ್ 2020, 12:31 IST
ಅನುಪಮ್ ಹಝ್ರಾ
ಅನುಪಮ್ ಹಝ್ರಾ   

ಕೋಲ್ಕತ್ತ:ಕೊರೊನಾ ಸೋಂಕಿಗೆ ಒಳಗಾದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅಪ್ಪಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಝ್ರಾಅವರಿಗೆ ಸೋಂಕು ದೃಢಪಟ್ಟಿದೆ.

ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅನುಪಮ್ ಹಝ್ರಾ ಅವರು ‘ನಾನು ಕೊರೊನಾ ಸೋಂಕಿಗೆ ಒಳಗಾದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅಪ್ಪಿಕೊಳ್ಳುತ್ತೇನೆ’ ಎಂದು ಬೆದರಿಕೆಯೊಡ್ಡಿದ್ದರು.

ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣಹಝ್ರಾ ಅವರು ಕೋಲ್ಕತ್ತದ ಖಾಸಗಿ ಆಸ್ಪತ್ರೆಯೊಂದಲ್ಲಿದಾಖಲಾಗಿದ್ದರು. ಇದೀಗ ಪರೀಕ್ಷಾ ವರದಿಯಲ್ಲಿ ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢ‍ಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.

ADVERTISEMENT

ಮಮತಾಗೆ ಬೆದರಿಕೆಯೊಡ್ಡಿದ ಸಂಬಂಧ ಟಿಎಂಸಿ ಪದಾಧಿಕಾರಿಗಳುಹಝ್ರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.