ADVERTISEMENT

ಉ.ಪ್ರದೇಶ |BJP ನಾಯಕನಿಗೆ ವಿಷಕಾರಿ ಚುಚ್ಚುಮದ್ದು ನೀಡಿ, ಹತ್ಯೆಗೈದ ದುಷ್ಕರ್ಮಿಗಳು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2025, 2:24 IST
Last Updated 11 ಮಾರ್ಚ್ 2025, 2:24 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಸಂಭಲ್: ಬಿಜೆಪಿ ನಾಯಕರೊಬ್ಬರಿಗೆ ದುಷ್ಕರ್ಮಿಗಳು ವಿಷಕಾರಿ ಚುಚ್ಚುಮದ್ದು ನೀಡಿ, ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಸಂಭಲ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಗುಲ್ಫಾಮ್ ಸಿಂಗ್ ಯಾದವ್ (60) ಎಂದು ಗುರುತಿಸಲಾಗಿದೆ. ಜುನವೈ ಪೊಲೀಸ್ ಠಾಣೆ ವ್ಯಾಪ್ತಿಯ ದಫ್ತಾರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ADVERTISEMENT

ಯಾದವ್ ತಮ್ಮ ಜಮೀನಿನ ಬಳಿ ಕುಳಿತಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವಿಷಕಾರಿ ಚುಚ್ಚುಮದ್ದನ್ನು ನೀಡಿ, ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಸ್ವಸ್ಥರಾಗಿದ್ದ ಯಾದವ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆಗಾಗಿ ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಯಾದವ್ ಅವರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಅವರು ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.