ADVERTISEMENT

ದ್ವೇಷ ಭಾಷಣ ಪ್ರಕರಣ: ನ್ಯಾಯಾಲಯಕ್ಕೆ ಶರಣಾದ BJP ಮುಖಂಡ ಪಿ.ಸಿ. ಜಾರ್ಜ್‌

ಪಿಟಿಐ
Published 24 ಫೆಬ್ರುವರಿ 2025, 12:35 IST
Last Updated 24 ಫೆಬ್ರುವರಿ 2025, 12:35 IST
ಪಿ.ಸಿ. ಜಾರ್ಜ್
ಪಿ.ಸಿ. ಜಾರ್ಜ್   

ಕೊಟ್ಟಾಯಂ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಪಿ.ಸಿ. ಜಾರ್ಜ್‌ ಸೋಮವಾರ ಈರಾಟ್ಟುಪೇಟ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಜಾರ್ಜ್‌ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಕೇರಳ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸುತ್ತಿದ್ದಂತೆ, ಪೊಲೀಸರು ಜಾರ್ಜ್ ಬಂಧನಕ್ಕೆ ಮುಂದಾಗಿದ್ದರು. ಬಂಧನದಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.

ADVERTISEMENT

ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಫೆ.24ರವರೆಗೂ ವಿನಾಯಿತಿ ನೀಡುವಂತೆ ಜಾರ್ಜ್ ಶನಿವಾರ ಪೊಲೀಸರಿಗೆ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.