ADVERTISEMENT

ಎನ್‌ಸಿಪಿ ನಾಯಕ ಶರದ್‌ ಪವಾರ್‌ ಭೇಟಿಯಾದ ಬಿಜೆಪಿ ಮುಖಂಡ ಸಂಜಯ್‌ ಕಾಕಡೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2019, 6:23 IST
Last Updated 24 ನವೆಂಬರ್ 2019, 6:23 IST
   

ಮುಂಬೈ: ಮಹಾರಾಷ್ಟ್ರ ಬಿಜೆಪಿ ಸಂಸದ ಸಂಜಯ್‌ ಕಾಕಡೆ ಅವರು ಇಂದು ಬೆಳಗ್ಗೆ ಎನ್‌ಸಿಪಿ ನಾಯಕಶರದ್‌ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಶಿವಸೇನಾ , ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯುವುದಕ್ಕೂ ಮುನ್ನ ನಡೆದ ಭೇಟಿಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿದ ನಂತರ ಎಎನ್‌ಐ ಜೊತೆ ಮಾತನಾಡಿರುವ ಸಂಜಯ್‌ ಕಾಕಡೆ, ‘ವೈಯಕ್ತಿಯ ಕಾರಣಗಳಿಗಾಗಿ ಶರದ್‌ ಪವಾರ್‌ ಭೇಟಿಯಾಗಿದ್ದೆ,’ ಎಂದಿದ್ದಾರೆ.

ಅಜಿತ್‌ ಪವಾರ್‌ ಅವರನ್ನು ಎನ್‌ಸಿಪಿ ಶಾಸಕಾಂಗ ಸ್ಥಾನದಿಂದ ವಜಾಗೊಳಿಸಿದ ನಂತರ ಆಯ್ಕೆಯಾಗಿರುವ ಜಯಂತ್‌ ಪಾಟೀಲ್‌ ಅವರು ಸಹ ಈ ಭೇಟಿ ವೇಳೆಯಲ್ಲಿ ಹಾಜರಿದ್ದರು ಎನ್ನಲಾಗಿದೆ.

ADVERTISEMENT

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ತುರಾತುರಿಯಲ್ಲಿ ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆ ಪ್ರಶ್ನಿಸಿ ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಸುಪ್ರೀಂ ಕೋರ್ಟ್‌ ಮೊರೆ ಹೋಗಿವೆ. ಮೂವರು ನ್ಯಾಯಮೂರ್ತಿಗಳ ಪೀಠವು ಇಂದು ಅರ್ಜಿ ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ ವಿಚಾರಣೆಗೂ ಮುನ್ನ ನಡೆದಬಿಜೆಪಿ ಮುಖಂಡ ಸಂಜಯ್‌ ಕಾಕಡೆ ಮತ್ತು ಎನ್‌ಸಿಪಿ ಮುಖಂಡ ಶರದ್‌ ಪವಾರ್ ನಡುವಿನ ಭೇಟಿಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.