ಪಟ್ನಾ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸೋಮವಾರ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದವರನ್ನು ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ, ತೆಲ್ಟಾ ಗ್ರಾಮದ ಸಂಜೀವ್ ಮಿಶ್ರಾ ಎಂದು ಗುರುತಿಸಲಾಗಿದೆ.
ತೆಲ್ಟಾದಲ್ಲಿರುವ ಮನೆಯ ಹೊರಗೆ ಕುಳಿತಿದ್ದ ವೇಳೆ ಸಂಜೀವ್ ಮಿಶ್ರಾ ಅವರ ಮೇಲೆ ದಾಳಿಕೋರರು ಗುಂಡು ಹಾರಿಸಿದ್ದಾರೆ.
ಅವರಿಗೆ ಎರಡು ಗುಂಡುಗಳು ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಳೆ ದ್ವೇಷ ಹಾಗೂ ಆಸ್ತಿ ವಿವಾದವೇ ದಾಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.