ADVERTISEMENT

BJP ಹಿರಿಯ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ನಿಧನ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 7:22 IST
Last Updated 30 ಸೆಪ್ಟೆಂಬರ್ 2025, 7:22 IST
<div class="paragraphs"><p>ವಿಜಯ್ ಕುಮಾರ್ ಮಲ್ಹೋತ್ರಾ (ಎಡ ಭಾಗದಲ್ಲಿ ಇರುವವರು)</p></div>

ವಿಜಯ್ ಕುಮಾರ್ ಮಲ್ಹೋತ್ರಾ (ಎಡ ಭಾಗದಲ್ಲಿ ಇರುವವರು)

   

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ಅವರು ಮಂಗಳವಾರ ಬೆಳ್ಳಿಗೆ ನಿಧನರಾದರು.

ಅವರಿಗೆ 93 ವರ್ಷ ವಯಸ್ಸಾಗಿತ್ತು.

ADVERTISEMENT

ಕಳೆದ ಕೆಲವು ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಲ್ಹೋತ್ರಾ ಅವರು ದೆಹಲಿ ಬಿಜೆಪಿಯ ಮೊದಲ ಅಧ್ಯಕ್ಷರಾಗಿದ್ದರು. ಅವರು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದರು. 2008ರ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು. ಆದರೆ ಈ ವೇಳೆ ಶೀಲಾ ದೀಕ್ಷಿತ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಮಲ್ಹೋತ್ರಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೆಹಲಿ ಸರ್ಕಾರ ಇಂದು ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.