ADVERTISEMENT

ಜಮ್ಮು: ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ನಾಯಕನ ಅಂಗರಕ್ಷಕ

ಪಿಟಿಐ
Published 11 ಅಕ್ಟೋಬರ್ 2020, 9:28 IST
Last Updated 11 ಅಕ್ಟೋಬರ್ 2020, 9:28 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಜಮ್ಮು: ಬಿಜೆಪಿ ನಾಯಕ ಜುಲ್‌ಫ್ಕರ್‌ ಪಠಾಣ್ ಅವರಅಂಗ ರಕ್ಷಕ, ಗಾಳಿಯಲ್ಲಿ ಕೆಲ ಸುತ್ತು ಗುಂಡು ಹಾರಿಸಿದ ಘಟನೆಜಮ್ಮು ಮತ್ತು ಕಾಶ್ಮೀರದ ಬಾಲಕೋಟ್‌ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.

‘ಬಿಜೆಪಿ ನಾಯಕ ಜುಲ್‌ಫ್ಕರ್‌ ಪಠಾಣ್‌ ಅವರ ವೈಯಕ್ತಿಕಭದ್ರತಾ ಸಿಬ್ಬಂದಿಯು (ಪಿಎಸ್‌ಒ), ಪಠಾಣ್‌ ಅವರ ಮನೆ ಬಳಿ ಸಂಶಯಾಸ್ಪದ ಚಟುವಟಿಕೆಯನ್ನು ಗಮನಿಸಿದ್ದಾರೆ. ಹಾಗಾಗಿ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಬಿಜೆಪಿ ನಾಯಕನ ಮನೆ ಸುತ್ತಲೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಅವರಿಗೆ ಸಂಶಯಾಸ್ಪದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.