ADVERTISEMENT

ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಭೆ, ಆರ್‌ಎಸ್‌ಎಸ್‌ ಭಾಗಿ

​ಪ್ರಜಾವಾಣಿ ವಾರ್ತೆ
Published 2 ಮೇ 2022, 15:25 IST
Last Updated 2 ಮೇ 2022, 15:25 IST
   

ನವದೆಹಲಿ: ಬಿಜೆಪಿ ಮುಖಂಡರು ಸೋಮವಾರ ಇಲ್ಲಿ ಸಭೆ ನಡೆಸಿದ್ದು, ಪಕ್ಷವನ್ನು ಸಂಘಟಿಸುವಲ್ಲಿನ ಸಮಸ್ಯೆಗಳು ಮತ್ತು ಸರ್ಕಾರದೊಂದಿಗಿನ ಸಮನ್ವಯದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆರ್‌ಎಸ್‌ಎಸ್‌ನ ಹಿರಿಯ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿವಾಸದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್, ನಿತಿನ್‌ ಗಡ್ಕರಿ, ಬಿಜೆಪಿಯ ಎಲ್ಲಾ ಮಾಜಿ ಅಧ್ಯಕ್ಷರು ಮತ್ತು ಆರ್‌ಎಸ್ಎಸ್‌ ಜಂಟಿ ಕಾರ್ಯದರ್ಶಿ ಅರುಣ್‌ ಕುಮಾರ್‌ ಸಭೆ ಸೇರಿ ಮೂರು ಗಂಟೆಗಳ ಕಾಲ ಚರ್ಚೆ ನಡೆಸಿದರು.

ಆರ್‌ಎಸ್‌ಎಸ್‌ನ ಹಿರಿಯ ಪದಾಧಿಕಾರಿ ಸುರೇಶ್‌ ಸೋನಿ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌.ಸಂತೋಷ್ ಅವರೂ ಸಭೆಯಲ್ಲಿದ್ದರು.

ADVERTISEMENT

ವರ್ಷಾಂತ್ಯದಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಹಿನ್ನೆಲೆನಡ್ಡಾ ಅವರು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಪಕ್ಷದ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿರುವ ಮಧ್ಯೆ ಈ ಸಭೆಯು ಕುತೂಹಲ ಕೆರಳಿಸಿದೆ.

ಸಭೆಯಲ್ಲಿ ಯಾವ ವಿಷಯ ಚರ್ಚೆ ನಡೆಸಲಾಯಿತು ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.