ADVERTISEMENT

ಮಣಿಪುರದಲ್ಲಿ ಬಿರೆನ್ ಸಿಂಗ್, ಗೋವಾದಲ್ಲಿ ಸಾವಂತ್ ಸಿಎಂ ಆಗಿ ಮುಂದುವರಿಕೆ ಸಾಧ್ಯತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮಾರ್ಚ್ 2022, 13:13 IST
Last Updated 16 ಮಾರ್ಚ್ 2022, 13:13 IST
ಬಿರೆನ್ ಸಿಂಗ್ ಹಾಗೂ ಪ್ರಮೋದ್ ಸಾವಂತ್
ಬಿರೆನ್ ಸಿಂಗ್ ಹಾಗೂ ಪ್ರಮೋದ್ ಸಾವಂತ್    

ನವದೆಹಲಿ: ಮಣಿಪುರದಲ್ಲಿ ಎನ್‌.ಬಿರೆನ್ ಸಿಂಗ್ ಹಾಗೂ ಗೋವಾದಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಗೋವಾದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಹೊಸ ಸರ್ಕಾರ ರಚನೆಯ ಸಂಬಂಧ ಪ್ರಮೋದ್‌ ಸಾವಂತ್ ಹೈಕಮಾಂಡ್‌ ಭೇಟಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.

ADVERTISEMENT

40 ಕ್ಷೇತ್ರಗಳ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿಯ (ಎಂಜಿಪಿ) ಇಬ್ಬರು ಶಾಸಕರು ಹಾಗೂ ಮೂವರು ಪಕ್ಷೇತರರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.

ಇತ್ತ ಬಿರೆನ್ ಸಿಂಗ್ ಅವರು ಇಂದು (ಬುಧವಾರ) ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

60 ಕ್ಷೇತ್ರಗಳ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.