ADVERTISEMENT

ಲೋಕಸಭಾ ಚುನಾವಣೆಗೆ ಬಿಜೆಪಿ ತಾಲೀಮು ಶುರು: ಮೂರು ಸಮಾವೇಶಗಳಲ್ಲಿ ಮೋದಿ ಭಾಗಿ

ಲೋಕಸಭಾ ಚುನಾವಣೆಗೆ ಬಿಜೆಪಿ ತಾಲೀಮು ಶುರು

​ಪ್ರಜಾವಾಣಿ ವಾರ್ತೆ
Published 31 ಜನವರಿ 2019, 20:08 IST
Last Updated 31 ಜನವರಿ 2019, 20:08 IST
   

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯ ಘಟಕ ತಾಲೀಮು ಆರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ ತಿಂಗಳಲ್ಲಿ ಮೂರು ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಮೋದಿ ಫೆ.10ರಂದು ಹುಬ್ಬಳ್ಳಿಗೆ ಬರಲಿದ್ದು, ಅಲ್ಲಿ ನಾಲ್ಕು ಜಿಲ್ಲೆಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. 19ರಂದು ಮತ್ತೆ ರಾಜ್ಯಕ್ಕೆ ಬರಲಿದ್ದು, ಸಮಾವೇಶದ ಸ್ಥಳ ನಿಗದಿಯಾಗಿಲ್ಲ. 27ರಂದು ಮತ್ತೊಂದು ಸಮಾವೇಶದಲ್ಲಿ ಪಾಲ್ಗೊಳ್ಳಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಈ ಕಾರ್ಯಕ್ರಮಗಳ ಉಸ್ತುವಾರಿಯನ್ನು ಶಾಸಕ ಆರ್‌.ಅಶೋಕ ಅವರಿಗೆ ವಹಿಸಲಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಫೆಬ್ರುವರಿ 14 ಹಾಗೂ 19ರಂದು ರಾಜ್ಯಕ್ಕೆ ಬರಲಿದ್ದಾರೆ. ಅವರು ಶಕ್ತಿ ಕೇಂದ್ರಗಳ ಸಮಾವೇಶಗಳಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ. ಪ್ರತಿ ಶಕ್ತಿ ಕೇಂದ್ರದಿಂದ 3–4 ಪ್ರಮುಖರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿ ಸಮಾವೇಶದಲ್ಲಿ ಕನಿಷ್ಠ 10 ಸಾವಿರ ಪ್ರಮುಖರು ಸೇರಲಿದ್ದಾರೆ ಎಂದರು.

ADVERTISEMENT

ಕೇಂದ್ರ ಸರ್ಕಾರದ ಸಾಧನೆಯನ್ನು ಪ್ರತಿ ಮನೆ ಮನೆಗೆ ತಲುಪಿಸಲು ಅಭಿಯಾನ ನಡೆಸಲಾಗುತ್ತದೆ. ಈ ಅಭಿಯಾನಗಳು ಫೆಬ್ರುವರಿ 26 ಹಾಗೂ 28ರಂದು ನಡೆಯಲಿವೆ. ಮಾರ್ಚ್‌ 2ರಂದು ‘ಕಮಲ ಸಂಕಲ್ಪ’ ರ‍್ಯಾಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.