ADVERTISEMENT

ಕರ್ನಾಟಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನ: ಕಾಂಗ್ರೆಸ್‌ ಆರೋಪ

ಪಿಟಿಐ
Published 28 ಅಕ್ಟೋಬರ್ 2023, 15:57 IST
Last Updated 28 ಅಕ್ಟೋಬರ್ 2023, 15:57 IST
ಕೆ.ಸಿ ವೇಣುಗೋಪಾಲ್
ಕೆ.ಸಿ ವೇಣುಗೋಪಾಲ್   

ನವದೆಹಲಿ: ಕರ್ನಾಟಕದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ದೂರಿದ್ದಾರೆ.

‘ಬಿಜೆಪಿ ನಾಯಕರ ತಂಡವು ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್‌ ಶಾಸಕರಿಗೆ ಆಮಿಷವೊಡ್ಡಲಾಗುತ್ತಿದೆ’ ಎಂದು ಕಾಂಗ್ರೆಸ್‌ ಶಾಸಕ ಗಣಿಗ ಪಿ. ರವಿಕುಮಾರ್‌ ಮಾಡಿರುವ ಆರೋಪ ಕುರಿತ ಮಾಧ್ಯಮ ವರದಿಯನ್ನು ವೇಣುಗೋಪಾಲ್‌ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ನಾಯಕ ಮತ್ತು ಕಾರ್ಯಸೂಚಿ ಹೊಂದಿರದ ಆ ಪಕ್ಷವು, ಜನರ ಆದೇಶಕ್ಕೆ ವಿರುದ್ಧವಾಗಿ ವರ್ತಿಸುವ ಹಳೆ ಛಾಳಿ ಮುಂದುವರಿಸಿದೆ. ಆದರೆ, ಅದು ಫಲಿಸುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.