ADVERTISEMENT

ಉಪರಾಷ್ಟ್ರಪತಿ ಚುನಾವಣೆ: ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ

ಪಿಟಿಐ
Published 16 ಆಗಸ್ಟ್ 2025, 5:21 IST
Last Updated 16 ಆಗಸ್ಟ್ 2025, 5:21 IST
   

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಂಬಂಧ ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಸಭೆ ಸೇರುವ ಸಾಧ್ಯತೆ ಇದೆ.

ಬಿಜೆಪಿ ಮತ್ತು ಎನ್‌ಡಿಎ ಮೈತ್ರಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ.

ಜಗದೀಪ್ ಧನಕರ್‌ ಅವರ ರಾಜೀನಾಮೆಯಿಂದ ಉಪರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಸೆಪ್ಟೆಂಬರ್‌ 9ರಂದು ಚುನಾವಣೆ ನಿಗದಿಯಾಗಿದೆ. ಆಗಸ್ಟ್‌ 18ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. 

ADVERTISEMENT

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಈಗಾಗಲೇ ಮೈತ್ರಿಕೂಟದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.