ADVERTISEMENT

ಮತ್ತೆ ದೇವೇಂದ್ರ ಫಡಣವಿಸ್ ಭೇಟಿ ಮಾಡಿದ ಶಾಸಕ ರಮೇಶ್ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2021, 11:47 IST
Last Updated 29 ಜೂನ್ 2021, 11:47 IST
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ    

ನವದೆಹಲಿ: ಮಂಗಳವಾರ ದಿಢೀರ್ ದೆಹಲಿಗೆ‌ ಬಂದಿರುವ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಸಂಜೆ ಇಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಮಧ್ಯಾಹ್ನ ಎರಡೂವರೆಗೆ ಬೆಂಗಳೂರಿನಿಂದ ಇಲ್ಲಿಗೆ ಬಂದ ಅವರು, ಫಡಣವಿಸ್ ಅವರನ್ನು ಇಲ್ಲಿರುವ ಆರ್‌ಎಸ್‌ಎಸ್ ಮುಖಂಡರೊಬ್ಬರ‌ ಮನೆಯಲ್ಲಿ ಭೇಟಿ ಮಾಡಿ 45 ನಿಮಿಷ ಚರ್ಚಿಸಿದರು.

ಕಳೆದ‌ ವಾರ‌ ಮುಂಬೈನಲ್ಲಿ ಫಡಣವಿಸ್‌ ಅವರನ್ನು ಜಾರಕಿಹೊಳಿ ಭೇಟಿ ಮಾಡಿದ್ದರು. ಭೇಟಿಯ ವೇಳೆ ಯಾವ ವಿಷಯ ಚರ್ಚಿಸಲಾಗಿದೆ ಎಂಬುದು ಗೊತ್ತಾಗಿಲ್ಲ.

ADVERTISEMENT

ತಮ್ಮ ವಿರುದ್ಧದ ತನಿಖೆ ಪೂರ್ಣಗೊಳಿಸಿ, ಕ್ಲೀನ್ ಚಿಟ್ ನೀಡುವ‌ ಮೂಲಕ ಮತ್ತೆ ಸಚಿವ ಸ್ಥಾನ ಕೊಡಿಸಬೇಕು ಎಂದು ಅವರು ಫಡಣವಿಸ್ ಅವರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿ ಭೇಟಿಯ ವೇಳೆ ಅವರು ಬಿಜೆಪಿಯ ಇನ್ನೂ ಕೆಲವು ಮುಖಂಡರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.