ADVERTISEMENT

ಮತದಾನದ ದಿನವೇ ಮೋದಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2019, 20:39 IST
Last Updated 3 ಏಪ್ರಿಲ್ 2019, 20:39 IST
   

ಬೆಂಗಳೂರು: ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುವ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ!

ಪ್ರಧಾನಿ ಅವರು 18ರಂದು ಬೆಳಿಗ್ಗೆ ಚಿಕ್ಕೋಡಿಯಲ್ಲಿ ಹಾಗೂ ಮಧ್ಯಾಹ್ನದ ನಂತರ ಗಂಗಾವತಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಎರಡೂ ಸಭೆಗಳು ಸಂಜೆ 5ರೊಳಗೆ ಮುಗಿಯಲಿವೆ. ಇದು ಪಕ್ಷದ ಚುನಾವಣಾ ಕಾರ್ಯತಂತ್ರದ ಭಾಗ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದರು. ಚಿಕ್ಕೋಡಿ, ಕೊಪ್ಪಳ ಸೇರಿದಂತೆ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 23ರಂದು ಮತದಾನ ನಡೆಯಲಿದೆ.

ರಾಜ್ಯದ ಆರು ಕಡೆಗಳಲ್ಲಿ ಮೋದಿ ಅವರು ಲೋಕಸಭಾ ಚುನಾವಣೆಯ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.